DK Shivakumar Statement: ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ. ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ದೇಶದಲ್ಲಿ ರಾಜಕಾರಣದಲ್ಲಿ ತಂದೆ ಹಾಗು ಪೂರ್ವಜರ ಹೆಸರಿನಲ್ಲಿ ಚುನಾವಣೆ ಮಾಡುತ್ತಿರುವಾಗ ಅವರ ಆಸ್ತಿ ವರ್ಗಾವಣೆಗೆ ಅವಕಾಶ ನೀಡುತ್ತಾರಾ? ದೇಶದ ಸಂಪತ್ತನ್ನು ನಗದೀಕರಣ ಮಾಡಲು ಬಿಜೆಪಿ ಮುಂದಾಗಿದೆ ಎಂಬ ಮಾಧ್ಯಮ ವರದಿ ಓದಿದ್ದ ನೆನಪು ನನಗೆ. ನಮ್ಮ ಪ್ರನಾಳಿಕೆಯಲ್ಲಿರುವ ಅಂಶಗಳು ಮಾತ್ರ ಪಕ್ಷದ ನಿಲುವು. ಅದರಿಂದಾಚೆಗಿನ ಅಂಶಗಳಿಗೆ ಪಕ್ಷಕ್ಕೆ ಸಂಬಂಧವಿಲ್ಲ ಎಂದರು. ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ ಎಂದು ತಿಳಿಸಿದರು.
ಮೊದಲ ಹಂತದ ಚುನಾವಣೆ ನಂತರ ಇಂತಹ ಹೇಳಿಕೆಗಳು ಹೆಚ್ಚಾಗಿರುವ ಬಗ್ಗೆ ಕೇಳಿದಾಗ, ತಮಿಳುನಾಡಿನ ನಮ್ಮ ಸ್ನೇಹಿತರು ನನ್ನ ಭೇಟಿಗೆ ಬಂದಿದ್ದರು. 40ಕ್ಕೆ 40 ಸೀಟು ಕಾಂಗ್ರೆಸ್ ಬೆಂಬಲಿತ ಮೈತ್ರಿಗೆ ಸಿಗಲಿದೆ. ಕೇರಳದಲ್ಲೂ ಇದೇ ವಾತಾವರಣ ಇದೆ ಎಂದು ತಿಳಿಸಿದರು.
DK Shivakumar Statement Lok Sabha Election 2024 DK Shivakumar Latest News DK Shivakumar Kannada News Congress ಡಿ.ಕೆ. ಶಿವಕುಮಾರ್ ಡಿ.ಕೆ. ಶಿವಕುಮಾರ್ ಸುದ್ದಿ ಕಾಂಗ್ರೆಸ್ ಸ್ಯಾಮ್ ಪಿತ್ರೊಡಾ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Read more »
ಕಾಂಗ್ರೆಸ್’ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್ ಅಶೋಕ್ ಆಕ್ರೋಶನಂತರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್ ಜಿಹಾದ್ಗೆ ಕಾಂಗ್ರೆಸ್ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ.
Read more »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Read more »
ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ : ಡಿಸಿಎಂ ಡಿ.ಕೆ. ಶಿವಕುಮಾರ್ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Read more »
ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.
Read more »
ಈ ಎಲೆ ಎಲ್ಲೇ ಸಿಕ್ಕರೂ ಬಿಡಬೇಡಿ: ಇದನೊಮ್ಮೆ ಜಗಿದರೆ ಸಾಕು ಚಿಟಿಕೆಯಲ್ಲಿ ಫುಲ್ ಕಂಟ್ರೋಲ್ ಆಗುತ್ತೆ ಬ್ಲಡ್ ಶುಗರ್!Leaves for diabetes: ಮಧುಮೇಹವು ಗಂಭೀರ ಕಾಯಿಲೆಯಾಗಿದ್ದು, ಇದಕ್ಕೆ ಶಾಶ್ವತ ಚಿಕಿತ್ಸೆ ಇಲ್ಲ. ಇದರರ್ಥ ಯಾರಿಗಾದರೂ ಮಧುಮೇಹ ಇದ್ದರೆ, ಜೀವನ ಪರ್ಯಂತ ಅದನ್ನು ಅನುಭವಿಸಲೇಬೇಕು.
Read more »